ಬಂಟ್ವಾಳ : ಕೆಎಸ್‌ಆರ್ ಟಿಸಿ ಬಸ್- ಬೈಕ್ ಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಸರಪಾಡಿ ನಿವಾಸಿ ಯುವಕ ಶ್ರೇಯಸ್ (30) ಮೃತ ದುರ್ದೈವಿ.ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಶ್ರೇಯಸ್, ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ.
ಢಿಕ್ಕಿಯಾಗಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಅಪಘಾತಕ್ಕೆ ಸ್ಥಳದಲ್ಲಿ
ರಕ್ತದೋಕುಳಿ ಹರಿದಿತ್ತು. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















