Coastal Bulletin

ಬಂಟ್ವಾಳ: ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಡಾ| ಸ್ಮಿತಾ ರಾಮು ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿ ಡಾ| ಸ್ಮಿತಾ ರಾಮು ಅವರನ್ನು ಬಂಟ್ವಾಳ ತಹಶೀಲ್ದಾರ್ ಆಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶ ನೀಡಿದೆ.

ಈ ಹಿಂದೆ ರಶ್ಮಿ ಎಸ್.ಆರ್.ಅವರು ಬಂಟ್ವಾಳ ತಹಶೀಲ್ದಾರ್ ಆಗಿದ್ದು, ಅವರನ್ನು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆ ಮಾಡಿದ

ಬಳಿಕ ಬಂಟ್ವಾಳ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ಡಾ| ಸ್ಮಿತಾ ಅವರು ಮೂಲದಲ್ಲಿ ದಂತ ವೈದ್ಯೆಯಾಗಿದ್ದಾರೆ.

ಮಂಗಳೂರಿನ ಏನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು ಬಳಿಕ ಸುಮಾರು 14 ವರ್ಷಗಳ ಕಾಲ ಮಂಡ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ನಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿದ್ದರು.


Leave a Comment