ಪೊಳಲಿ: ಫೆಬ್ರವರಿ/ ಮಾರ್ಚ್ ತಿಂಗಳಲ್ಲಿ ನಡೆದ ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ಬಡಕಬೈಲು ಸಮೀಪದ ಸಂತ ಡೊಮಿನಕ್ಸ್ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಒಟ್ಟು 54 ವಿದ್ಯಾರ್ಥಿಗಳು ಹಾಜರಾಗಿದ್ದು 23 ವಿದ್ಯಾರ್ಥಿಗಳು ವಿಶಷ್ಟ ಶ್ರೇಣಿಯೊಂದಿಗೆ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ,
ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.















