ಕುಂದಾಪುರ: ಕರಾವಳಿ ಜಿಲ್ಲೆಯ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅನಾರೋಗ್ಯದಿಂದ ಇಂದು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ವಾರ ಡೆಂಗ್ಯೂ ಜ್ವರ ಇದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಇಂದು ಕೊನೆಯುಸಿರೆಳೆದ್ದಿದ್ದಾರೆ.
ಸಹಕಾರಿ, ಕೃಷಿ, ರಾಜಕೀಯದಲ್ಲಿ ತೊಡಗಿಸಿಕೊಂಡ ಇವರು, ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 2006-8ರ ತನಕ ರಾಜ್ಯ ದ ಮೂರನೇ ಹಣಕಾಸು ಅಯೋಗ ಅಧ್ಯಕ್ಷ
ಮತ್ತು ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1993 ರಲ್ಲಿ ಬಿಜೆಪಿ ಸೇರಿ ಹಲವು ಮಹತ್ವದ ಹುದ್ದೆಗಳನ್ನು ನಿಭಾಯಿಸಿದ್ದರು.
ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ, ರಾಜ್ಯ ಆಹಾರ ನಿಗಮದ ಅಧ್ಯಕ್ಷ ಕಿರಣ್ ಕೊಡ್ಗಿ, ರೈತಸಂಘ ಅಧ್ಯಕ್ಷ ಅಶೋಕ್ ಕೊಡ್ಗಿ ಸೇರಿದಂತೆ ಐವರು ಪುತ್ರರನ್ನು ಮತ್ತು ಪುತ್ರಿಯನ್ನು ಅಗಲಿದ್ದಾರೆ.

















