ಕಲ್ಲಡ್ಕ :ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ "ಆಟಿದ ವನಸ್" ವಿಶೇಷ ಕಾರ್ಯಕ್ರಮ.

Coastal Bulletin
ಕಲ್ಲಡ್ಕ :ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ "ಆಟಿದ ವನಸ್" ವಿಶೇಷ ಕಾರ್ಯಕ್ರಮ.

ಬಂಟ್ವಾಳ :ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಆ. 12ರಂದು "ಆಟಿದ ವನಸ್" ವಿಶೇಷ ಕಾರ್ಯಕ್ರಮ ನಡೆಯಿತು. ಆಟಿ ತಿಂಗಳಿನಲ್ಲಿ ತಯಾರಿಸುವ ವಿಶೇಷ ಖಾದ್ಯಗಳನ್ನು ವಿದ್ಯಾರ್ಥಿಗಳು ಸ್ವತಃ ಮನೆಯಿಂದ  ತಯಾರಿಸಿ ತಂದು ಕಾಲೇಜಿನಲ್ಲಿ ಸಹಭೋಜನ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರಕಟ್ಟೆ, ಅಧ್ಯಕ್ಷ ನಾರಾಯಣ ಸೋಮಯಾಜಿ, ಶ್ರೀರಾಮ

ಪ್ರಾಥಮಿಕ  ವಿಭಾಗದ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಬಬಿತಾ ಆಟಿಯ ಮಹತ್ವವನ್ನು ತಿಳಿಸಿದರು. ಬಿಸಿಎ ವಿದ್ಯಾರ್ಥಿ ಜಯಸೂರ್ಯ ಕಾರ್ಯಕ್ರಮ ನಿರ್ವಹಿಸಿದರು.

Leave a Comment