ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಹಯೋಗದೊಂದಿಗೆ 139ನೇ ರಕ್ತದಾನ ಶಿಬಿರವು ನವೆಂಬರ್ 15ರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಜೀವ ಉಳಿಸುವ ಮಹತ್ಕಾರ್ಯದ ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಬಿ. ಜಗನ್ನಾಥ ಭಟ್ ಉದ್ಘಾಟಿಸಲಿದ್ದು, ಕಲಾವಿದ
ಸದಾಶಿವ ಡಿ. ತುಂಭೆ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ತರ ಸೇವೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









