ಬಂಟ್ವಾಳ :ಸಹಕಾರಿ ಕ್ಷೇತ್ರದಲ್ಲಿ ನಿರಂತರ 48 ವರ್ಷಗಳ ಸುದೀರ್ಘ ಹಾಗೂ ಅವಿರತ ಸೇವೆಯನ್ನು ಪರಿಗಣಿಸಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ “ರಾಜ್ಯ ಸಹಕಾರ ರತ್ನ” ಪ್ರಶಸ್ತಿಗೆ ಮಾಜಿ ಶಾಸಕರು ಹಾಗೂ ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ., ಕಲ್ಲಡ್ಕ ಇದರ ಅಧ್ಯಕ್ಷರಾದ ಶ್ರೀ ಕೆ. ಪದ್ಮನಾಭ ಕೊಟ್ಟಾರಿ ಆಯ್ಕೆಯಾಗಿದ್ದಾರೆ.
ನ. 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ
ಅವರಿಂದ ಕೆ. ಪದ್ಮನಾಭ ಕೊಟ್ಟಾರಿ ಅವರು ರಾಜ್ಯ ಸಹಕಾರಿ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.









