Coastal Bulletin

ಬಂಟ್ವಾಳ :ಡಿ.12. ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೊಜಿಸಲಾಗಿತ್ತು.

ಈ ತರಭೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಭಿಷೇಕ್ ಎನ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯಶಂಕರ ಆಳ್ವ, ಪಂಚಾಯತ್ ಸದಸ್ಯರು, ಅಂಗನವಾಡಿ ಮೇಲ್ವಿಚಾರಕಿ ರೆಹನಾ,ಬಂಟ್ವಾಳ ತಾಲೂಕು MGNREGA ಯ IEC ಸಿಬ್ಬಂದಿ ರಾಜೇಶ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿಗಳು ಸೇರಿ ಒಟ್ಟು 59 ಮಂದಿ ಭಾಗವಹಿಸಿದ್ದರು.

 ಜಲ ಜೀವನ್

ಮಿಷನ್ ನ ಸಮುದಾಯ ಸಂಘಟಕರಾದ ಗುಣವತಿಯವರು ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.ಐಇಸಿ ಸಿಬ್ಬಂದಿ ರಾಜೇಶ್ ರವರು ದ್ರವತ್ಯಾಜ್ಯ ಘಟಕ ವೆಚ್ಚ ಮತ್ತು ನರೇಗಾ ಯೋಜನೆಯ ಇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕಿನ ಅನುಷ್ಟಾನ ಬೆಂಬಲ ಸಂಸ್ಥೆಯ ಸಿಬ್ಬಂದಿಯವರಾದ ಗುಣವತಿಯವರು ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಗೊಳಿಸಿದರು.

Leave a Comment