ಬಂಟ್ವಾಳ:ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕಾರಯುತ ಶಿಕ್ಷಣ ನೀಡಿದಾಗ ತಂದೆ-ತಾಯಿ ಸಹಿತ ಗುರು ಹಿರಿಯರಿಗೆ ಗೌರವ ನೀಡುವ ಮೂಲಕ ಸ್ವಸ್ಥ ಮತ್ತು ಸಮೃದ್ಧ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಹೇಳಿದ್ದಾರೆ.
ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ವಸಂತ ಕುಮಾರ್ ಅಣ್ಣಳಿಕೆ, ಪ್ರಭಾಕರ ಪ್ರಭು, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್, ಲೊರೆಟ್ಟೊ - ಅಗ್ರಾರ್ ಲಯನ್ಸ್ ಕ್ಲಬ್ ಅಧ್ಯಕ್ಷ ಫೆಲಿಕ್ಸ್ ಲೋಬೋ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ರತ್ನಾ ಆನಂದ್, ಮಾಜಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಕ್ಲಸ್ಟರ್ ಸಿ ಆರ್ ಪಿ ಪ್ರೇಮಲತಾ ಶುಭ ಹಾರೈಸಿದರು.
ಇದೇ ವೇಳೆ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಧುಕರ
ಬಂಗೇರ ಶಿವನಗರ, ಟ್ರಸ್ಟಿ ಹರೀಶ ಆಚಾರ್ಯ ರಾಯಿ, ಕೆ.ಪರಮೇಶ್ವರ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ ಮಿಯಾಲು, ಉಪಾಧ್ಯಕ್ಷೆ ಚಂದ್ರಾವತಿ ಲೋಕೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಮಿತ್ ಶಿವನಗರ, ಎಎಸೈ ಮಹಾಬಲ ನಾಯ್ಕ್, ಶಂಭೂರು ಮುಖ್ಯಶಿಕ್ಷಕ ಜಯರಾಮ ಪಡ್ರೆ, ನಿವೃತ್ತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ, ಪತ್ರಕರ್ತ ಮೋಹನ್ ಕೆ.ಶ್ರೀಯಾನ್, ಅರ್ಚಕ ದಿನೇಶ ಭಟ್ ರಾಯಿ, ಪ್ರಮುಖರಾದ ವಸಂತ ಗೌಡ ಮುದ್ದಾಜೆ, ರಾಮಸುಂದರ ಗೌಡ, ರಾಘವ ಅಮೀನ್, ಕೃಷ್ಣಪ್ಪ ಪೂಜಾರಿ ಕಾರಂಬಡೆ, ಶ್ರೀನಿವಾಸ ಮೂಲ್ಯ, ಸುಧೀರ್ ಶೆಟ್ಟಿ ರಾಯಿ, ರಾಘವೇಂದ್ರ ರಾಯಿ ಮತ್ತಿತರರು ಇದ್ದರು.
ಮುಖ್ಯಶಿಕ್ಷಕಿ ಜಾನೆಟ್ ಕೊನ್ಸೆಸೊ ಸ್ವಾಗತಿಸಿ, ವಂದಿಸಿದರು. ಶಿಕ್ಷಕಿ ಬೇಬಿ ಮತ್ತು ತನುಜಾ ಕಾರ್ಯಕ್ರಮ ನಿರೂಪಿಸಿದರು.














