ಮಂಗಳೂರು : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರದ ವತಿಯಿಂದ ನನ್ನ ವೃತ್ತಿ ನನ್ನ ಆಯ್ಕೆ ಕಾರ್ಯಕ್ರಮ

Coastal Bulletin
ಮಂಗಳೂರು : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರದ ವತಿಯಿಂದ ನನ್ನ ವೃತ್ತಿ ನನ್ನ ಆಯ್ಕೆ ಕಾರ್ಯಕ್ರಮ

ಮಂಗಳೂರು : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರ ಜೈಲ್ ರೋಡ್ ಬಿಸೆಂಟ್ ಕೊಡಿಯಾಲಬೈಲ್, ಮಂಗಳೂರು ಇದರ ವತಿಯಿಂದ ದಿನಾಂಕ 10-12-2024 ರಂದು "ನನ್ನ ವೃತ್ತಿ ನನ್ನ ಆಯ್ಕೆ" ಕಾರ್ಯಕ್ರಮದ ಜಿಲ್ಲಾ ಹಂತದ ಅನುಷ್ಠಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವು ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ವಾಗಿದ್ದು,ಮಕ್ಕಳಲ್ಲಿ ತಮ್ಮ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಲು ಹಾಗೂ ಸ್ಟೂಡೆಂಟ್ಸ್ ಟು ಪ್ರೊಫೆಷನಲ್ ಮಾಡುವ ಗುರಿಯನ್ನು ಹೊಂದಲಾಗಿದೆ.

ಕಾರ್ಯಕ್ರಮವು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಸಮಗ್ರ ಶಿಕ್ಷಣ ಕರ್ನಾಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಅನಾಹತ ಯುನೈಟೆಡ್ ಫೌಂಡೇಶನ್ ಸಹಯೋಗದಲ್ಲಿ ಅನುಷ್ಠಾನವಾಗುತ್ತದೆ. ಕಾರ್ಯಕ್ರಮದ ಭಾಗವಾಗಿ ಕಾರ್ಯ ಪುಸ್ತಕಗಳು ಜಿಲ್ಲಾ ಹಂತಕ್ಕೆ ತಲುಪಿದ್ದು,ಅದರಂತೆ ಜಿಲ್ಲಾ ಹಂತದಲ್ಲಿ ಜಿಲ್ಲಾ ಹಂತದ ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲೆಯ ಡಯಟ್ ನ ಪ್ರಾಂಶುಪಾಲರಾದ ಶ್ರೀಮತಿ ರಾಜೇಶ್ವರಿ ಅವರು ಹಾಗೂ ನನ್ನ ವೃತ್ತಿ ನನ್ನ ಆಯ್ಕೆ ಕಾರ್ಯಕ್ರಮದ ಮೈಸೂರು ವಿಭಾಗೀಯ ವ್ಯವಸ್ಥಾಪಕರಾದ ಪ್ರಸನ್ನ ಕುಮಾರ್

ಡಿ ಕೆ ರವರು ಅಭ್ಯಾಸ ಪುಸ್ತಕಗಳನ್ನು ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿದರು. 

ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿಯ ಶ್ರೀಮತಿ ವಿಜಯಲಕ್ಷ್ಮಿ ರವರು ಕಾರ್ಯಕ್ರಮವನ್ನು ಸಂಯೋಜಿಸಿ ಯಶಸ್ವಿಗೊಳಿಸಿದರು. 

ಈ ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲರಾದ ಶ್ರೀಮತಿ ರಾಜೇಶ್ವರಿ ಅವರು, ಕಾರ್ಯಕ್ರಮದ ಮೈಸೂರು ವಿಭಾಗೀಯ ವ್ಯವಸ್ಥಾಪಕರಾದ ಪ್ರಸನ್ನ ಕುಮಾರ್ ಡಿ ಕೆ ರವರು ಕಾರ್ಯಕ್ರಮದ ನೋಡಲ್ ಅಧಿಕಾರಿಯಾದ ಶ್ರೀಮತಿ ವಿಜಯಲಕ್ಷ್ಮಿ ರವರು ಹಾಗೂ ಡಯಟ್ ನ ಹಿರಿಯ ಹಾಗೂ ಸರಿಯ ಉಪನ್ಯಾಸಕರು ಮತ್ತು ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದರು.

Leave a Comment