Coastal Bulletin

ಬಂಟ್ವಾಳ :ಜ.13ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ತರಬೇತಿಯಲ್ಲಿ  ಗ್ರಾಮ ಪಂಚಾಯತ್  ಅಧ್ಯಕ್ಷೆ ಹಿರನ್ಮಯಿ ,ಉಪಾಧ್ಯಕ್ಷೆ ಜ್ಯೋತಿ , ಪಂಚಾಯತ್ ಸದಸ್ಯರು,  ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು   ಸೇರಿ ಒಟ್ಟು  46 ಮಂದಿ ಭಾಗವಹಿಸಿದ್ದರು. ಜಲ ಜೀವನ್  ಮಿಷನ್ ನ 

ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ಗುಣವತಿ ಹಾಗು ವಿಲ್ಮ ರವರು  ಮಳೆ  ನೀರು ಕೊಯ್ಲು ಘಟಕ ಮತ್ತು ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ಬಂಟ್ವಾಳ ತಾಲೂಕಿನ ಜಲ ಜೀವನ್ ಮಿಷನ್ ನ ಸಮುದಾಯ ಸಂಘಟಕರಾದ ವಿಲ್ಮಾ ರವರು ಕಾರ್ಯಕ್ರಮವನ್ನು ಆಯೊಜಿಸಿ. ಯಶಸ್ವಿಗೊಳಿಸಿದರು

Leave a Comment