ಬಂಟ್ವಾಳ :ಲಯನ್ಸ್ ಕ್ಲಬ್ ಮಾಣಿ ಇದರ ಅಶ್ರಯದಲ್ಲಿ ಪದವಿ ಪೂರ್ವ ಕಾಲೇಜು ತುಂಬೆಯಲ್ಲಿ ವಿದ್ಯಾರ್ಥಿಗಳಿಗಾಗಿ ಪರಿಣಾಮಕಾರಿ ಅಧ್ಯಯನ ಹಾಗೂ ವೃತ್ತಿ ಮಾರ್ಗದರ್ಶನ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಜ 14ರಂದು ಶನಿವಾರ ನಡೆಯಿತು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ರೋನಾಲ್ಡ್ ಪಿಂಟೋ ಭಾಗವಹಿಸಿ ಸುಮಾರು 150 ಮಕ್ಕಳಿಗೆ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಮಾಣಿ ಇದರ ಅಧ್ಯಕ್ಷರಾದ Ln.ಉಮೇಶ್ ಪಿ,
ಮುಖ್ಯ ಅತಿಥಿಗಳಾಗಿ ಪ್ರೊ. ರೋನಾಲ್ಡ್ ಪಿಂಟೋ. ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ Ln. ಗಂಗಾಧರ ಆಳ್ವಾ ಲಯನ್ಸ್ ಕ್ಲಬ್ ಕಾರ್ಯದರ್ಶಿ Ln. ರವಿಕಿರಣ್ ಶೆಟ್ಟಿ, ಪ್ರಾಧ್ಯಾಪಕರಾದ ಅಬ್ದುಲ್ ರಹಿಮಾನ್ ಮತ್ತಿತರರು ಉಪಸ್ಥಿತರಿದ್ದರು.














