ಬಂಟ್ವಾಳ :ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಕಿನ್ನಿಬೆಟ್ಟು ಅಮ್ಟಾಡಿ ಇದರ ವಾರ್ಷಿಕೋತ್ಸವ ಸಮಾರಂಭ ಜ.10 ಶನಿವಾರ ಶಾಲಾ ವಠಾರದಲ್ಲಿ ನಡೆಯಿತು.
ಶಾಲಾ ವಾರ್ಷಿಕೋತ್ಸವದ ಉದ್ಘಾಟನೆಯನ್ನು ಶ್ರೀ ಅಣ್ಣಪ್ಪ ಪಂಜುರ್ಲಿ ದೈವಸ್ಥಾನ ಮಂಗ್ಲೀಮಾರ್ ಅಮ್ಟಾಡಿ ಇಲ್ಲಿನ ಆಡಳಿತ ಮೊಕ್ತೇಸರರು,ಕರ್ನಾಟಕ ಸರಕಾರದ ಧಾರ್ಮಿಕ ಪರಿಷತ್ತು ಇದರ ಖಾಯಂ ಆಹ್ವಾನಿತರಾದ ರವಿಶಂಕರ್ ಶೆಟ್ಟಿ ಬಡಾಜೆಗುತ್ತು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಅಮ್ಟಾಡಿ ಗ್ರಾ ಪಂ ಅಧ್ಯಕ್ಷ ವಿಜಯ ಕುಮಾರ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸಂಜೀವ ಪೂಜಾರಿ ಗುರುಕೃಪ ಪೆಟ್ರೋಲಿಯಂ ಬಿ.
ಸಿ ರೋಡ್.ಭುವನೇಶ್ ಪಚ್ಚಿನಡ್ಕ ಶುಭ ಬೀಡೀಸ್, ಗ್ರಾ ಪಂ ಸದಸ್ಯರಾದ ನಳಿನಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಜಾತ,,ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕೇಶ್ ಕುಲಾಲ್ ಮೈರ, ಭಾಗವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಆರತಿ ಅಮೀನ್ ಸ್ವಾಗತಿಸಿ, ವರದಿ ವಾಚಿಸಿದರು, ಶಿಕ್ಷಕಿ ಚೈತ್ರ ಧನ್ಯವಾದವಿತ್ತು ಶಿಕ್ಷಕಿ ತನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಹಳೇ ವಿದ್ಯಾರ್ಥಿಗಳು ಸಹಕರಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.











