ಬಂಟ್ವಾಳ :ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪತ್ರಿಕೆ ಬಿಡುಗಡೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಭುವನೇಶ್ ಪಚಿನಡ್ಕ ಇವರ ನೇತೃತ್ವದಲ್ಲಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಎದುರು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರತಿಸ್ಥಾಪಕರಾದ ದಿ. ಸದಾಶಿವ ಎಂ ಕರ್ಕೇರವರ ಧರ್ಮಪತ್ನಿ ಶಾರದಾ ಎಂ. ಕರ್ಕೇರ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪಾಡಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಉಮೇಶ್ ಸಾಲಿಯಾನ್ ಬೆಂಜನಪದವು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ
ದೇವಪ್ಪ ಪೂಜಾರಿ ಬಾಳಿಕೆ,ಪುರೋಹಿತರಾದ ಗುರುಪ್ರಸಾದ್ ಉಡುಪರು ಶರಣ, ಅರ್ಚಕರಾದ ರಮೇಶ್ ಪೂಜಾರಿ, ಶ್ರೀ ಆದಿಶಕ್ತಿ ಚಾಮುಂಡೆಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ನ ಟ್ರಸ್ಟಿಗಳು ಹಾಗೂ ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸರ್ವ ಸದಸ್ಯರಯ ಹಾಗೂ ಊರ-ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.










