Coastal Bulletin

ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಏ.5ರಿಂದ 10ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶನಿವಾರ ಸಂಜೆ ಬಿಡುಗಡೆಗೊಳಿಸಿದರು. ಇದೇ ವೇಳೆ ರೂ 50ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳಿಸುತ್ತಿರುವ ತೀರ್ಥಕೆರೆ ಕಾಮಗಾರಿ ವೀಕ್ಷಿಸಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾಪ್ರಸಾದ್ ಶೆಟ್ಟಿ ಕರೆಂಕಿಜೆ, ಪ್ರಧಾನ ಅರ್ಚಕ ಸುಂದರ ಹೊಳ್ಳ, ಕಾರ್ಯಧ್ಯಕ್ಷರು ಸಂತೋಷ್ ಕುಮಾರ್ ಚೌಟ, ವ್ಯವಸ್ಥಾಪನಾ

ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪ್ರಧಾನ ಕಾರ್ಯದರ್ಶಿ ದಿನೇಶ ಸುವರ್ಣ ಮತ್ತಿತರರು ಇದ್ದರು.

Leave a Comment