ಸುಳ್ಯ; ಕೆಎಸ್ ಆರ್ ಟಿಸಿ ಬಸ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮಕ್ಕಳು ಸೇರಿ ಆರು ಮಂದಿ ಮೃತಪಟ್ಟ ದುರಂತ ಘಟನೆ ನಡೆದಿದೆ.
ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬಂದ ಶಿಪ್ಟ್ ಕಾರು ಸಂಪಾಜೆ ಪೆಟ್ರೋಲ್ ಪಂಪ್ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಕೆಸ್ ಆರ್ ಟಿ ಸಿ ಬಸ್
ಡಿಕ್ಕಿಯಾಗಿದೆ.
ಸಂಪಾಜೆ ಪೇಟೆ ಬಳಿ ಅಪಘಾತ ನಡೆದಿದೆ.ಅಪಘಾತದಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿತ್ತು.ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೂವರು ಮಕ್ಕಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರಲ್ಲಿ ಇಬ್ಬರು ಮಹಿಳೆ, ಓರ್ವ ಗಂಡಸು, ಮೂವರು ಮಕ್ಕಳಿದ್ದರು ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂ ಆಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.













