Coastal Bulletin

ಮಂಗಳೂರು : ಮಳಲಿಯಲ್ಲಿರುವ ಮಸೀದಿ ವಿವಾದದ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಳಲಿ ಮಸೀದಿ ಬಗ್ಗೆ ಮಂಗಳೂರು ಸಿವಿಲ್ ಕೋರ್ಟ್ ವಿಚಾರಣೆ ಮಾತ್ರವೇ ಮಾಡಬೇಕು. ಈ ಬಗ್ಗೆ ಯಾವುದೇ ಆದೇಶವನ್ನು ಹೊರಡಿಸುವಂತಿಲ್ಲ ಎಂದು ಮಂಗಳೂರು ಜಿಲ್ಲಾ ಮೂರನೇ ಸಿವಿಲ್ ಕೋರ್ಟ್ ಗೆ ಹೈಕೋರ್ಟ್ ಸೂಚನೆ ನೀಡಿದೆ.

ಮಸೀದಿಯಲ್ಲಿ ದೇಗುಲ ಹೋಲುವ ರಚನೆ ಕಂಡುಬಂದ ಹಿನ್ನೆಲೆಯಲ್ಲಿ ಮಸೀದಿ ನವೀಕರಣಕ್ಕೆ ತಡೆಯಾಜ್ಞೆ ನೀಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿತ್ತು. ಮಂಗಳೂರಿನ ತೆಂಕಳೈಪಡಿ ಗ್ರಾಮದ ಧನಂಜಯ್ ಹಾಗೂ ಬಡುಗಳೈಪಡಿ ಗ್ರಾಮದ ಮನೋಜ್ ಕುಮಾರ್ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್‌ ನೇತೃತ್ವದ

ಏಕಸದಸ್ಯ ಪೀಠವು ನಡೆಸಿತು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಂಗಳೂರು ಕೋರ್ಟ್ ಗೆ ಯಾವುದೇ ಆದೇಶವನ್ನು ನೀಡುವಂತಿಲ್ಲ ಎಂದು ಸೂಚನೆ ನೀಡಿದೆ. ಮಸೀದಿಯ ಯಥಾಸ್ಥಿತಿಯನ್ನು ಮುಂದುವರಿಸುವಂತೆ ಸೂಚನೆ ನೀಡಿದ್ದು, ವಿವರವಾದ ವಿಚಾರಣೆ ನಡೆಯುವವರೆಗೆ ಕೆಳಹಂತದ ನ್ಯಾಯಾಲಯ ಯಾವುದೇ ಆದೇಶ ನೀಡುವಂತಿಲ್ಲ ಎಂದಿದೆ. ವಿಚಾರಣೆಯನ್ನು ಜೂನ್‌ 17ಕ್ಕೆ ಮುಂದೂಡಿದೆ.

Leave a Comment