ಮೊಡಂಕಾಪು: ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ.

Coastal Bulletin
ಮೊಡಂಕಾಪು: ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ.

ಬಂಟ್ವಾಳ: ತಾಲೂಕಿನ, ಮೊಡಂಕಾಪು ಇನ್ ಫೆಂಟ್   ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 'ಆಟಿಡೊಂಜಿ ದಿನ' ಕಾರ್ಯಕ್ರಮವು ಅನುಗ್ರಹ  ಚರ್ಚ್  ಸಭಾಂಗಣದಲ್ಲಿ ಸೋಮವಾರದಂದು ನಡೆಯಿತು.


ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಕಪ್ಪ ಶೆಟ್ಟಿ ನಿವೃತ್ತ ಮುಖ್ಯೋಪಾಧ್ಯಾಯರು ಬಡಗೆ ಬೆಳ್ಳೂರು ಶಾಲೆ, ಇವರು ಮಾತನಾಡಿ, ವಿದ್ಯಾರ್ಥಿಗಳು  ನಮ್ಮ ಹಿರಿಯರ ಸಂಸ್ಕೃತಿ,ಆಚರಣೆ ಹಾಗೂ ಉತ್ತಮ ಮೌಲ್ಯಗಳನ್ನು ಕಲಿಯಬೇಕಾದರೆ ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ  ಸಹಾಯಕ ಧರ್ಮ ಗುರುಗಳಾದ ವಂ.ಫಾ.ಪ್ರಮೋದ್ ಕ್ರಾಸ್ತಾ ರವರು ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಜಾತಿಭೇದವಿಲ್ಲದೆ ಬದುಕುವ ಜಾಗವೆಂದರೆ ಅದು ಶಾಲೆ. ಪರಸ್ಪರ ಹೊಂದಿಕೊಂಡು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಸಮಾಜದಲ್ಲಿ ಬದುಕಬೇಕು ಎಂದರು.

ಶಾಲಾ ಮುಖ್ಯೋಪಾಧ್ಯಾಯರಾದ

ವಂ. ಫಾ.ಮೆಲ್ವಿನ್ ಲೋಬೋ   ರವರು ,ಸಹ ಮುಖ್ಯೋಪಾಧ್ಯಾಯಿನಿಯವರಾದ ಗ್ಲಾಡಿಸ್ ಡಿಸೋಜರವರು,ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡೇನಿಯಲ್ ಡಿಸಿಲ್ವಾರವರು ವೇದಿಕೆಯಲ್ಲಿದ್ದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಪೋಷಕರು ಹಾಗೂ ಸಂಘದ ಸದಸ್ಯರು ಆಟಿಯ   ವಿವಿಧ   ಖಾದ್ಯಗಳನ್ನು ತಯಾರಿಸಿ ತಂದಿದ್ದರು.  ಔಷಧಿ ಸಸ್ಯಗಳ ಪ್ರದರ್ಶನವನ್ನು ಏರ್ಪಡಿಸಿದ್ದರು ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಪಾಯಸವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ರಕ್ಷಕ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಮಾಸ್ಟರ್ ಪ್ರಜ್ವಲ್  ಸ್ವಾಗತಿಸಿ, ಕುಮಾರಿ ಮಾನ್ಸಿ ವಂದಿಸಿದರು. ಶಿಕ್ಷಕಿ ಚೇತನ ಕಾರ್ಯಕ್ರಮ ನಿರೂಪಿಸಿದರು.

Leave a Comment