ಪೊಳಲಿ -ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಬಿರುಕು ಬಿಟ್ಟಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಂತೆ ಆ ಸೇತುವೆಯಲ್ಲಿ ಘನ ವಾಹನಗಳು ಸಂಚಾರಿದಂತೆ ನಿರ್ಬಂಧ ಹೇರಳಲಾಗಿತ್ತು. ಈಗಾಗಲೇ ಈ ಸೇತುವೆ ಸಾಮರ್ಥ್ಯ ಧಾರಣಾ ಯಂತ್ರ ಬಂದು ಎಲ್ಲ ಪರಿಶೀಲನೆ ಮಾಡಿದೆಯಾದರೂ, ಎರಡು ತಿಂಗಳಾದರೂ ಈ ಸೇತುವೆಯ ಕುರಿತು ಯಾವುದೇ ಸೂಕ್ತ ಕ್ರಮವನ್ನು ಕೈಗೊಳ್ಳದ ಹಿನ್ನಲೆಯಲ್ಲಿ ಅಮ್ಮುಂಜೆ , ಕರಿಯಂಗಳ , ಬಡಗಬೆಳ್ಳೂರು, ತೆಂಕಬೆಳ್ಳೂರು ಹಾಗೂ ಸುತ್ತಮುತ್ತಲಿನ ನಾಗರಿಕರ ಕಾರಣ ತುರ್ತು ಸಭೆಯು ಪೊಳಲಿ ರಾಮಕೃಷ್ಣ ತಪೋವನದ ರಾಜರಾಜೇಶ್ವರೀ ಸಭಾಂಗಣದಲ್ಲಿ ನಡೆಯಿತು.
ಜನಪ್ರತಿನಿಧಿಗಳಿಗೆ ಪರ್ಯಾಯ ರಸ್ತೆಯನ್ನು ಕಲ್ಪಿಸಲು ಮನವಿ ಮಾಡಿ ಒಂದು ವಾರ ಕಳೆದರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಅ 15ರಂದು ಸೇತುವೆ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಯಿತು. ಸ್ವಯಂ ಪ್ರೇರಿತವಾಗಿ ಅಂಗಡಿ ಮುಗಟ್ಟನ್ನು ಬಂದ್ ಮಾಡಿ, ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲು
ಸ್ಥಳೀಯರಲ್ಲಿ ವಿನಂತಿ ಮಾಡುವ ಮೂಲಕ ಪ್ರತಿಭಟನೆಯನ್ನು ನಡೆಸುವುದಾಗಿ ನಿರ್ಧರಿಸಲಾಯಿತು.
ಈ ವೇಳೆ ವೇದಿಕೆಯಲ್ಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಜೆ ಉಪಸ್ಥಿತರಿದ್ದರು.















