ಬಂಟ್ವಾಳ :ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 ವರ್ಷ ವಯಸ್ಸಿನ ಸಾಲು ಮರದ ತಿಮ್ಮಕ್ಕ ಕಳೆದ ಕೆಲವು ದಿನಗಳ ಹಿಂದೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು 12ಗಂಟೆಗೆ ವಿಧಿವಶರಾಗಿದ್ದಾರೆ.
ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, ಪರಿಸರ
ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, 385 ಆಲದ ಮರಗಳನ್ನು ನೆಟ್ಟು ಪೋಷಿಸುವುದರೊಂದಿಗೆ ಕರ್ನಾಟಕದಾದ್ಯಂತ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ. ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ಸಂದಿವೆ.















