ಬಂಟ್ವಾಳ :ತಾಲೂಕಿನ ಪುದು ಗ್ರಾಮದ ನಡುಬೈಲಿನ ಕಲಾ ಸಂಗಮ ಸಂಸ್ಥೆಯ 32ನೇ ವಾರ್ಷಿಕೋತ್ಸವವು ಜ.18ರಂದು ಹೊಯ್ಗೆಗದ್ದೆ ಶ್ರೀ ರಾಮ ಮಂದಿರದ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಅಂದು ಅಪರಾಹ್ನ 3.30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕೊಲ್ಲೂರು ಕ್ಷೇತ್ರ ಮಹಾತ್ಮೆಎಂಬ ಯಕ್ಷಗಾನ ಬಯಲಾಟ ಜರುಗಲಿದೆ.
ಅಪರಾಹ್ನ 3-00ಕ್ಕೆ
ನಡುಬೈಲು ದಿ। ಕೃಷ್ಣ ಭಟ್‌ರವರ ಮನೆಯಿಂದ ಚೌಕಿಗೆ ದೇವರ ಮೆರವಣಿಗೆ ಬರಲಿದ್ದು, ಪೂಜೆ 5-30ಕ್ಕೆ ಚೌಕಿ ಪೂಜೆ, ಪ್ರಸಾದ ವಿತರಣೆ ಹಾಗೂ ರಾತ್ರಿ 8-00ರಿಂದ ಸಾಮೂಹಿಕ ಅನ್ನ ಸಂತರ್ಪಣೆ ಜರುಗಲಿದೆ ಎಂದು ಸಂಘಟಕ ಸುರೇಶ್ ನಡುಬೈಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










