Coastal Bulletin

ಬಂಟ್ವಾಳ ತಾಲ್ಲೂಕಿನ ಬಂಟರ ಸಂಘದ ವತಿಯಿಂದ ತುಂಬೆ ಬಂಟರ ಭವನದಲ್ಲಿ ಸೋಮವಾರ ನಡೆದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಅಧಿಕಾರ ಸ್ವೀಕರಿಸಿದರು.

ಸಂಘದ ನಿಕಟಪೂರ್ವ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು ಇವರು ಸಂಘದ ಕಡತವನ್ನು ನೂತನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ರಂಗೋಲಿ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷ ಡಾ.ಪ್ರಶಾಂತ್ ಮಾರ್ಲ, ಕಾರ್ಯದರ್ಶಿ ಜಗನ್ನಾಥ್ ಚೌಟ ಬದಿಗುಡ್ಡೆ ಮಾಣಿ, ಜತೆ ಕಾರ್ಯದರ್ಶಿ ರಂಜನ್ ಶೆಟ್ಟಿ ಅರಳ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ, ಜತೆ ಕೋಶಾಧಿಕಾರಿ ಪ್ರತಿಭಾ ರೈ ಪಾಣೆಮಂಗಳೂರು ಅಧಿಕಾರ ಸ್ವೀಕರಿಸಿದರು.

ಇದೇ

ವೇಳೆ ವಿವೇಕ್ ಶೆಟ್ಟಿ ನಗ್ರಿಗುತ್ತು ದಂಪತಿಯನ್ನು ಸನ್ಮಾನಿಸಲಾಯಿತು. ನಿಕಟಪೂರ್ವ ಪದಾಧಿಕಾರಿ ಜಗದೀಶ್ ಶೆಟ್ಟಿ ಇರಾಗುತ್ತು, ಮಹಿಳಾ ಸಮಿತಿ ಅಧ್ಯಕ್ಷೆ ಆಶಾ ಪಿ. ರೈ, ಸುಮಾ ನವೀನ್ ಶೆಟ್ಟಿ ಮುಂಡಾಜೆಗುತ್ತು, ಜ್ಯೋತಿ ಪಿ.ಶೆಟ್ಟಿ ಮಾಣಿ ಇದ್ದರು.

 ಜತೆ ಕಾರ್ಯದರ್ಶಿ ನವೀನ್ ಶೆಟ್ಟಿ ಮುಂಡಾಜೆಗುತ್ತು ವರದಿ ವಾಚಿಸಿದರು. ಉಪಾಧ್ಯಕ್ಷ ಕಿರಣ್ ಹೆಗ್ಡೆ ಸ್ವಾಗತಿಸಿ, ಜಗನ್ನಾಥ್ ಚೌಟ ವಂದಿಸಿದರು .ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು

Leave a Comment