Coastal Bulletin

ಪುದು ಗ್ರಾ.ಪಂ.ಚುನಾವಣೆ ಫೆ.25 ರಂದು ನಡೆಯಲಿದ್ದು, ಒಟ್ಟು 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದ್ದು, ಒಂದು ನಾಮಪತ್ರ ತಿರಸ್ಕೃತ ಗೊಂಡಿದ್ದು, ಉಳಿದಂತೆ 102 ಅಭ್ಯರ್ಥಿಗಳ ನಾಮಪತ್ರ ಸಿಂಧುವಾಗಿದೆ. ಬಾರೀ ಕುತೂಹಲ ಕೆರಳಿಸಿರುವ ಪುದು ಗ್ರಾಮಪಂಚಾಯತ್ ನಲ್ಲಿ ಈ ಬಾರಿ ಅತೀ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಕಾಂಗ್ರೆಸ್ ಬಿಜೆಪಿ,ಎಸ್. ಡಿ.ಪಿ.ಐ. ಪಕ್ಷಗಳ

ಬೆಂಬಲಿತ ಅಭ್ಯರ್ಥಿಗಳ ಜೊತೆ ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಗ್ರಾ.ಪಂ.ಚುನಾವಣೆಯಲ್ಲಿ ಅಭ್ಯರ್ಥಿಗಳ ಕೊರತೆಯ ನಡುವೆಯೂ ಈ ರೀತಿಯ ದಾಖಲೆಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದು ಅಚ್ಚರಿ ಮೂಡಿದೆ. ಫೆ.17 ರಂದು ‌ನಾಮಪತ್ರ ಹಿಂದೆಗೆಯಲು ಕೊನೆಯ ದಿನವಾಗಿದ್ದು, ರಾಜಕೀಯ ತಂತ್ರಗಾರಿಕೆಯ ಮಧ್ಯೆ ಏನಾಗುತ್ತದೆ….ಯಾರು ಕಣದಲ್ಲಿ ಉಳಿಯುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

Leave a Comment