Coastal Bulletin

ಬಂಟ್ವಾಳ :ಫೆ.11 ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರಿಂಜೆ ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಗಾರದಲ್ಲಿ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಸೇರಿ ಒಟ್ಟು 23 ಮಂದಿ ಭಾಗವಹಿಸಿದ್ದರು. ಜಲ ಜೀವನ್

ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ಗುಣವತಿಯವರು ಮಳೆನೀರು ಕೊಯ್ಲು ಘಟಕ ಮತ್ತು ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿ ,ಕಾರ್ಯಕ್ರಮವನ್ನು ಆಯೊಜಿಸಿ, ಯಶಸ್ವಿಗೊಳಿಸಿದರು.

Leave a Comment