ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ತಾಲೂಕಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಸತಿ ನಿಲಯಗಳಲ್ಲಿ ಇರುವ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಒಂದು ಹಬ್ಬ ಸಂಭ್ರಮಿಸೋಣ ವಿಶೇಷ ತರಬೇತಿ ಕಾರ್ಯಗಾರ ಬೊಂಡಾಲದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ನಡೆಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಐ ಭಾರತದ ವಲಯ ತರಬೇತುದಾರ ಪತ್ರಕರ್ತ ಸಂದೀಪ್ ಸಾಲ್ಯಾನ್ ತರಬೇತಿ
ನೀಡಿದರು.
ವಾಮದಪದವು ವಸತಿ ನಿಯಲದ ಮೇಲ್ವಿಚಾರಕಿ ಭವಾನಿ ಕಾರ್ಯಕ್ರಮ ಸಂಘಟಿಸಿದ್ದರು. ವಿವಿಧ ವಸತಿ ನಿಲಯಗಳ ಮೇಲ್ವಿಚಾರಕರು, ವಾರ್ಡನ್ ಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತರಬೇತುದಾರ ಸಂದೀಪ್ ಸಾಲ್ಯಾನ್ ಅವರನ್ನು ಗೌರವಿಸಲಾಯಿತು.














