ಬಂಟ್ವಾಳ: ಅಂಬೇಡ್ಕರ್ ಅವರಂತಹ ಮಹಾನ್ ಶಕ್ತಿಯನ್ನು ಕೆಲವರಿಗೆ ಮಾತ್ರ ಮಾತ್ರ ಸೀಮಿತಗೊಳಿಸದೆ ದೇಶದ ಸಮಗ್ರ ಬೆಳವಣಿಗೆಗೆ ಅವರ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಲ್ಳಬೇಕು ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರುಕ್ಮಯ ಎಂ.ಕಕ್ಯಪದವು ಮಾತನಾಡಿದರು.
ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ತಹಶೀಲ್ದಾರ್ ರಶ್ಮಿ ಎಸ್.ಆರ್., ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸಮಾಜ ಕಲ್ಯಾಣಾಧಿಕಾರಿ ಜಯಶ್ರೀ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಂದಿಯಾ ನಾಯಕ್, ಭವ್ಯ ಇದ್ದರು.













