Coastal Bulletin

ಬಂಟ್ವಾಳ :ಜಕ್ರಿಬೆಟ್ಟು ಸಮೀಪ ಮೊನ್ನೆ ಅವಘಡ ಸಂಭವಿಸಿದ್ದು,ಅದರ ನೆನಪು ಮಾಸುವ ಮುನ್ನವೇ ಮತ್ತೊಂದು ಸರಕಾರಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳೀಯ ನಿವಾಸಿ ದಿವಂಗತ ಕೊರಗ ಮೂಲ್ಯ ಎಂಬವರ ಪುತ್ರ ಡೊಂಬಯ್ಯ ಮೂಲ್ಯ (64) ಅವರು ದಾರುಣವಾಗಿ ಮೃತಪಟ್ಟಿದ್ದಾರೆ.

ಡೊಂಬಯ್ಯ ಅವರು ಅವರ ಸಂಬಂಧಿಕರ ಮನೆಯಲ್ಲಿ ಸಂಕ್ರಮಣದ ದಿನದಂದು ದೈವದ ಕೆಲಸಕ್ಕೆ ಹೂ ತರಲೆಂದು ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಡೊಂಬಯ್ಯ ಅವರು ಬಿಸಿರೋಡು ಕುಲಾಲ ಸಮುದಾಯ ಭವನದಲ್ಲಿ ಅನೇಕ ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಪಘಾತದ ತೀವ್ರತೆಗೆ ಸ್ಕೂಟರ್

ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಂಟ್ವಾಳ ಸಂಚಾರಿ ಠಾಣಾ ಪೆÇಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಬಸ್ ಚಾಲಕ ಕಲ್ಮರುಪ್ಪ ಎಂಬಾತನ ಅಜಾರೂಕತೆ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎನ್ನಲಾಗಿದ್ದು, ಬಸ್ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Comment