ಮಂಗಳೂರು :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಖಿಲ ಭಾರತ ಮುಂಡಾಲ ಯುವ ವೇದಿಕೆ ವತಿಯಿoದ ನಡೆದ ಸಂವಿಧಾನ ಶಿಲ್ಪಿ ಭಾರತರತ್ನ ಮಾಹಾನಾಯಕ ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ ಪ್ರಯುಕ್ತ ಕುದ್ಮುಲ್ ರಂಗರಾವ್ ಪುರಭವನ ದಲ್ಲಿರುವ ಅಂಬೇಡ್ಕರ್ ರವರ ಪ್ರತಿಮೆಗೆ ವೇದಿಕೆಯ ಅಧ್ಯಕ್ಷರಾದ ಪ್ರದೀಪ್ ಕಾಪಿಕಾಡ್ ಮಾಲಾರ್ಪಣೆಗೈದು ನಮನ ಸಲ್ಲಿಸಿದರು.
ಈ ಸಂದರ್ಭ ಮಾಜಿ ನಗರ ಪಾಲಿಕೆ ಸದಸ್ಯರಾದ ಭರತ್ ಕುಮಾರ್, ಹಾಗೂ ಕಿರಣ್ ಕುಮಾರ್ ಕೊಡಿಯಾಲ್ ಬೈಲ್, ರಘುವೀರ್ ಬಾಬುಗುಡ್ಡ ,
ರಘುರಾಜ್ ಕದ್ರಿ , ರವಿ ಕಾಪಿಕಾಡ್, ಸಂದೀಪ್ ಬೋಳೂರು, ಪ್ರವೀಣ್ ಕೋಡಿಕಲ್, ಹರೀಶ್ ಕಾಪಿಕಾಡ್, ಬಾಲಕೃಷ್ಣ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಪ್ರತಾಪ್ ಸಾಲ್ಯಾನ್ ಕದ್ರಿ ಸ್ವಾಗತಿಸಿ ವಂದಿಸಿದರು














