ಮಂಗಳೂರಿಗೆ 100 ಇಲೆಕ್ಟ್ರಿಕಲ್ ಬಸ್ ಮಂಜೂರುಗೊಳಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಕೃತಜ್ಞತೆ : ಪ್ರಭಾಕರ ಪ್ರಭು.

Coastal Bulletin
ಮಂಗಳೂರಿಗೆ 100 ಇಲೆಕ್ಟ್ರಿಕಲ್ ಬಸ್ ಮಂಜೂರುಗೊಳಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಕೃತಜ್ಞತೆ : ಪ್ರಭಾಕರ ಪ್ರಭು.

ಬಂಟ್ವಾಳ :ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ದೇಶದೆಲ್ಲೆಡೆ ಇಲೆಕ್ಟ್ರಿಕಲ್ ಬಸ್ಸುಗಳ ಬಳಕೆಯಾಗುವ ಯೋಚನೆಯಲ್ಲಿ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಮಂಜೂರುಗೊಳಿಸಿದ 750 ಇಲೆಕ್ಟ್ರಿಕಲ್ ಬಸ್ಸುಗಳ ಪೈಕಿ ಮಂಗಳೂರು ನಗರಕ್ಕೆ ಸಹ ಒಟ್ಟು 100 ಹೊಸ ಇಲೆಕ್ಟ್ರಿಕಲ್ ಬಸ್ಸುಗಳನ್ನು ಮಂಜೂರು ಮಾಡಿಸುವಲ್ಲಿ ಸಫಲತೆ ಕಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾ .ಬ್ರಿಜೇಶ್ ಚೌಟರನ್ನು ಜಿಲ್ಲೆಯ ಸಮಸ್ತ ನಾಗರಿಕರ ಪರವಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಪ್ರಮುಖರಾದ ಪ್ರಭಾಕರ ಪ್ರಭು ಕೃತಜ್ಞತೆ ಸಲ್ಲಿಸಿದ್ದಾರೆ.

ಅವರು ಈ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಪರಿಸರ ಸ್ನೇಹಿ ಬಸ್ ಸಂಚಾರಕ್ಕೆ ಒತ್ತು ನೀಡಿರುವುದಲ್ಲದೆ ತಕ್ಷಣದಿಂದಲೇ ಅನುಷ್ಠಾನಗೊಳಿಸುವಂತಾಗಲೂ ಕೇಂದ್ರ ಸರಕಾರವು ಕೈಗೊಂಡ ಈ

ದಿಟ್ಟ ನಿರ್ಧಾರಕ್ಕೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹರ್ ಲಾಲ್ ಖಟ್ಟರ್ ರವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ .pp

Leave a Comment