ಮಂಗಳೂರು:ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಪ್ರತಿಷ್ಠಿತ ಕೆನರಾ ಇಂಜಿನಿಯರಿಂಗ್ ಕಾಲೇಜ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನಡೆಯಿತು.
ದೇಶದ ಸ್ವಾತಂತ್ರ್ಯಕ್ಕಾಗಿ ಜೀವ, ಜೀವನನ್ನೇ ತ್ಯಾಗ ಮಾಡಿದ ನಮ್ಮ ಹಿರಿಯರ , ಹೋರಾಟಗಾರರ ಬದುಕನ್ನು ತಿಳಿಯುವ ಹಾಗೂ ಮುಂದಿನ ಪೀಳಿಗೆಗೂ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆನರಾ ಹೈಸ್ಕೂಲ್
ಎಸೋಸಿಯೇಶನ್ ಉಪಾಧ್ಯಕ್ಷ ಎಂ. ಪದ್ಮನಾಭ ಪೈ ಧ್ವಜಾರೋಹಣ ನೆರವೇರಿಸಿ ಹೇಳಿದರು. ಅವರು ಸಂಚಾಲಕರಾಗಿರುವ ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.















