ಬಂಟ್ವಾಳ : ದೇಶದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ದೊರಕಿಸಿ ಕೊಟ್ಟು ದೇಶವಾಸಿಗಳು ನೆಮ್ಮದಿಯಿಂದ ಬದುಕು ಮುನ್ನಡೆಸಲು ಅವಕಾಶ ಮಾಡಿಕೊಟ್ಟ ಸ್ವಾತಂತ್ರ್ಯ ಸೇನಾನಿಗಳನ್ನು ಪ್ರತಿನಿತ್ಯ ನೆನಪಿಸಿಕೊಳ್ಳುವ ಅಗತ್ಯವಿದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷೆ ಗೀತಾ ಪಿ. ಬಲ್ಲಾಳ್ ಮಾವಂತೂರು ಹೇಳಿದ್ದಾರೆ.
ಇಲ್ಲಿನ ಕೊಯಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ 80 ನೇ ವರ್ಷದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಕೊಯಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಸಿದ್ದಕಟ್ಟೆ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ,
ಮಾಜಿ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ ಶುಭ ಹಾರೈಸಿದರು. ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ಕ್ಲಬ್ಬಿನ ಸದಸ್ಯೆ ಸುಮಿತ್ರಾ ಆರ್. ಶೆಟ್ಟಿಗಾರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಒಸ್ವಾಲ್ಡ್ಫೆ ರ್ನಾಂಡಿಸ್, ಹಳೆ ವಿದ್ಯಾರ್ಥಿಗಳು ಮತ್ತಿತರರು ಇದ್ದರು. ಮುಖ್ಯಶಿಕ್ಷಕಿ ಭಾರತಿ ವೇದಾನಂದ ಕಾರಂತ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಪಾಸ್ಕಲ್ ವಂದಿಸಿದರು.













