ಬಂಟ್ವಾಳ: ಮುಹಿಯುದ್ದೀನ್ ಎಜ್ಯುಕೇಷನಲ್ ಟ್ರಸ್ಟ್ (ರಿ.) ವತಿಯಿಂದ ಆ.15ರಂದು ತುಂಬೆ ವಿದ್ಯಾಸಂಸ್ಥೆಯಲ್ಲಿ 80ನೇ ವರ್ಷದ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಫೀಸಾ ಗ್ರೂಪ್ ಆಫ್ ಕಂಪೆನಿʼ(ಯು.ಎ.ಇ.) ಅಧ್ಯಕ್ಷ ಹಾಗೂ ಬ್ಯಾರೀಸ್ ಕಲ್ಚರಲ್ ಫೋರಂನ ಸ್ಥಾಪಕ ಸಲಹೆಗಾರ ಅಬುಸಾಲಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ಮಾತನಾಡಿ, ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿ, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ತುಂಬೆ ಪದವಿ ಪೂರ್ವ ಕಾಲೇಜಿನ ಕಚೇರಿ ಅಧೀಕ್ಷಕ ಬಿ. ಅಬ್ದುಲ್ ಕಬೀರ್, ರಕ್ಷಕ
ಶಿಕ್ಷಕ ಸಂಘದ ಉಪಾಧ್ಯಕ್ಷೆ ಮೋಹಿನಿ ಸುವರ್ಣ, ಕಾರ್ಯಕಾರಿ ಮಂಡಳಿ ಸದಸ್ಯರಾದ ಚಂಚಲಾಕ್ಷಿ, ಮ್ಯಾಕ್ಸಿಮ್ ಕುವೆಲ್ಲೊ, ಅಬ್ದುಲ್ ಗಫೂರ್, ಕಾಲೇಜಿನ ಹಿರಿಯ ವಿದ್ಯಾರ್ಥಿ ಮಹಮ್ಮದ್ ಸಫ್ವೀರ್ ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ದಿನೇಶ್ ಶೆಟ್ಟಿ ಅಳಿಕೆ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರೌಢಶಾಲಾ ಕನ್ನಡ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ ರೈ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ವಂದಿಸಿದರು.
ವಿದ್ಯಾಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.













