ನೆತ್ತರಕೆರೆ :ತಾಲೂಕಿನ ನೆತ್ತರಕೆರೆ ಎಡುವೆಂಚರ್ ಪಿಯು ಕಾಲೇಜಿನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ. ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿ:ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ, ಶಿಕ್ಷಣ ತಜ್ಞ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಆಗಮಿಸಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯವು ಅನೇಕ ವೀರ ಸೇನಾನಿಗಳ ತ್ಯಾಗ, ಹೋರಾಟ ಮತ್ತು ಬಲಿದಾನದ ಫಲವಾಗಿದ್ದು, ಯುವಜನತೆ ದೇಶದ ಪ್ರಗತಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ
ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಸ್ತು, ದೇಶಪ್ರೇಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಆಧಾರವೆಂದು ಅವರು ತಿಳಿಸಿದರು.
ಕಾಲೇಜಿನ ಅಧ್ಯಕ್ಷರಾದ ಅಮೃತ್ ರೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀಮತಿ ರಕ್ಷಿತಾ ಅಮೃತ್ ರೈ,ಎಲ್ಲಾ ಟ್ರಸ್ಟಿಗಳು ಪ್ರಾಂಶುಪಾಲರು, ಬೋಧಕ–ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಕೀರ್ತನಾ ರಾವ್ ಹಾಗೂ ಸತೀಶ್ ಆಚಾರ್ಯ. ಕಾರ್ಯಕ್ರಮವನ್ನು ನಿರೂಪಿಸಿದರು.













