ಬಂಟ್ವಾಳ :ಬಿ.ಸಿ. ರೋಡ್‌ನ ಶ್ರೀ ಸಾಯಿ ಕಿಡ್ ಜೋನ್ ವಿದ್ಯಾ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ವೀಕ್ಷಾ ನಿಶಾಂತ್ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಟೌನ್ ಪ್ಲಾನಿಂಗ್ ಅಥಾರಿಟಿ, ಬಂಟ್ವಾಳದ ಅಧಿಕಾರಿ ಶ್ರೀಮತಿ ಗಾಯತ್ರಿ ಡಿ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ವೀಕ್ಷಾ ನಿಶಾಂತ್, ರಕ್ಷಕ ಶಿಕ್ಷಕ ಸಂಘದ ಕೋಶಾಧ್ಯಕ್ಷರಾದ ಶ್ರೀಮತಿ ಗಾಯತ್ರಿ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಆರತಿ ಅಮೀನ್,ಮತ್ತು ಆಶ್ರಿತ್ ಅಮೀನ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಶಾಲಾ ಸಂಚಾಲಕರಾದ ಶ್ರೀ ಐತಪ್ಪ ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾತಂತ್ರ್ಯದ ಮಹತ್ವ ಹಾಗೂ ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ,
ಪೋಷಕರಿಗಾಗಿ ಆಯೋಜಿಸಿದ್ದ ‘ಬೆಂಕಿ ಬಳಸದೆ ಅಡುಗೆ ತಯಾರಿ’ ಸ್ಪರ್ಧೆಯ ವಿಜೇತರಿಗೂ ಬಹುಮಾನ ನೀಡಲಾಯಿತು.
ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಯುಕೆಜಿ ವಿದ್ಯಾರ್ಥಿಗಳಾದ ಮಾನ್ವಿ ಸ್ವಾಗತ ಭಾಷಣ ಮಾಡಿದರು. ಶ್ರೀಶಾ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಸಾರ್ಥಕ್ ರಾವ್ ವಂದಿಸಿದರು. ವೀಕ್ಷಾ ಎನ್. ಕುಲಾಲ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಕಿಯರಾದ ಶ್ರೀಮತಿ ಪೂರ್ಣಿಮಾ, ಶ್ರೀಮತಿ ಪುಷ್ಪಲತಾ, ಶ್ರೀಮತಿ ಮಮತಾ, ಶ್ರೀಮತಿ ಗೀತಾ, ಶ್ರೀಮತಿ ದಿವ್ಯಾ, ಶ್ರೀಮತಿ ಅಂಬಿಕಾ ಹಾಗೂ ಶಿಕ್ಷಕ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಸಹಕರಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿ ದೇಶಪ್ರೇಮ ಮತ್ತು ರಾಷ್ಟ್ರೀಯತೆಯ ಮನೋಭಾವವನ್ನು ಮತ್ತಷ್ಟು ಬಲಪಡಿಸುವಂತಾಯಿತು.













