ನೆತ್ತರಕೆರೆ : ಭಕ್ತಿ ಭಾವ ಸಂಭ್ರಮದ ಗಣೇಶೋತ್ಸವದಲ್ಲಿ ಮಿಂದೆದ್ದ ಎಡುವೆಂಚರ್ ಕಾಲೇಜು.

Coastal Bulletin
ನೆತ್ತರಕೆರೆ : ಭಕ್ತಿ ಭಾವ ಸಂಭ್ರಮದ ಗಣೇಶೋತ್ಸವದಲ್ಲಿ ಮಿಂದೆದ್ದ ಎಡುವೆಂಚರ್ ಕಾಲೇಜು.

ಬಂಟ್ವಾಳ: ತಾಲೂಕಿನ ನೆತ್ತರಕೆರೆ ಎಡುವೆಂಚರ್ ಕಾಲೇಜಿನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಗಣೇಶೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಸೆ.14ರಂದು ಸೋಮವಾರ ಆಚರಿಸಲಾಯಿತು.

ಕಾಲೇಜಿನ ಆವರಣದಲ್ಲಿ ವಿಶೇಷವಾಗಿ ಅಲಂಕರಿಸಲಾಗಿದ್ದ ವೇದಿಕೆಯಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕಾಲೇಜಿನ ಅಧ್ಯಕ್ಷ ಅಮೃತ್ ರೈ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಗಣೇಶನಿಗೆ ಪೂಜೆ ಸಲ್ಲಿಸಿದರು.

ಗಣೇಶೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಭಜನೆ, ನೃತ್ಯ ಭಜನೆ ಸೇರಿದಂತೆ ವಿವಿಧ ಕಲಾ ಪ್ರದರ್ಶನಗಳು ನೆರೆದವರ ಗಮನ ಸೆಳೆದವು. ವಿದ್ಯಾರ್ಥಿಗಳು ಹಾಗೂ ಸ್ಥಳೀಯರು

ಉತ್ಸಾಹದಿಂದ ಪಾಲ್ಗೊಂಡು ಉತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು.

ಸಂಜೆ ಮಹಾಪೂಜೆಯ ಬಳಿಕ ಗಣೇಶನ ಮೂರ್ತಿಯನ್ನು ನೆತ್ರಕೆರೆ  ಬಳಿಯ ಕೆರೆಯಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಸರ್ಜಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಅಧ್ಯಕ್ಷ ಅಮೃತ್ ರೈ, “ಹಬ್ಬಗಳು ವಿದ್ಯಾರ್ಥಿಗಳಲ್ಲಿ ಒಗ್ಗಟ್ಟು, ಸಹಕಾರ, ಸೌಹಾರ್ದತೆ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬಗಳನ್ನು ಆಚರಿಸುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದರು.

ಗಣೇಶೋತ್ಸವದ ಯಶಸ್ಸಿಗೆ ಸಹಕರಿಸಿದ ನವೋದಯ ಮಿತ್ರ ಕಲಾ ವೃಂದ,ನೆತ್ತರಕೆರೆ ಹಾಗೂ ಸ್ಥಳೀಯರ ಸಹಕಾರವನ್ನು ಈ ಸಂದರ್ಭದಲ್ಲಿ ಅವರು ಸ್ಮರಿಸಿದರು.

Leave a Comment