ಬಂಟ್ವಾಳ :ತಾಲೂಕಿನಲ್ಲಿ ತುಂಬೆ ಶಾಲಾ ಅಂಗನವಾಡಿ ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಪಂಡಿತ್ ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಟಾಣಿಗಳಿಂದ ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ದೇಶಾದ್ಯಂತ ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಇಂದಿನ ಪ್ರಚಲಿತ ವಿದ್ಯಮಾನಗಳಲ್ಲಿ ಆರೋಗ್ಯವಂತ, ಸಚ್ಚಾರಿತ್ರ್ಯವಂತ ಮಕ್ಕಳನ್ನು ಬೆಳೆಸುವುದು ಹೆತ್ತವರಿಗೆ ಸವಾಲಾಗಿದೆ. ಮಕ್ಕಳನ್ನು ಮೊಬೈಲ್, ದುರ್ವ್ಯಸನ ಹಾಗೂ ದುಶ್ಚಟಗಳಿಂದ ದೂರವಿರಿಸಿ ಜಾಗರೂಕತೆಯಿಂದ ಪಾಲಿಸಿ, ಪೋಷಿಸಿ ಬೆಳೆಸಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಆಟೋಟ
ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸಿಹಿತಿಂಡಿ, ಕೇಕ್ ಮತ್ತು ಪಾನೀಯಗಳನ್ನು ವಿತರಿಸಲಾಯಿತು. ಪುಟಾಣಿಗಳು ತಮ್ಮ ಹೆತ್ತವರೊಂದಿಗೆ ಸಂಭ್ರಮದಿಂದ ಕುಣಿದು ಕುಪ್ಪಳಿಸಿ ದಿನಾಚರಣೆಯ ಖುಷಿಯನ್ನು ಹಂಚಿಕೊಂಡರು.
ವೇದಿಕೆಯಲ್ಲಿ ತುಂಬೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ, ಪೋಷಕರಾದ ಫರ್ಝಾನಾ ಮತ್ತು ಗೀತಾ ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ ಸ್ವಾಗತಿಸಿ ವಂದಿಸಿದರು. ಸಹಾಯಕಿ ಮಮತಾ ಸಹಕರಿಸಿದರು.









