ಬಂಟ್ವಾಳ : ಬೆಂಗಳೂರಿನಿಂದ ಮಂಗಳೂರಿಗೆ ಬರುತಿದ್ದ ಇನ್ನೋವಾ ಕಾರೊಂದು ಇಂದು ನ 15ರಂದು ಮುಂಜಾನೆ 5ರ ಸುಮಾರಿಗೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟ್ಟಿದ್ದು ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64) ರಮ್ಯ (23) ಹಾಗೂ ನಂಜಮ್ಮ ( 75) ಎಂದು ಗುರುತಿಸಲಾಗಿದೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಚಾಲಕ ಸುಬ್ರಹ್ಮಣ್ಯ ಹಾಗೂ
ಕಿರಣ್ ಅವರು ಗಂಭೀರವಾಗಿ ಗಾಯಗೊಂಡಿದ್ದ ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.















