Coastal Bulletin

ಬಂಟ್ವಾಳ : ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಳ್ಳಿಗೆ. ನೆತ್ತರಕೆರೆ ಇದರ ವಾರ್ಷಿಕೋತ್ಸವ ಸಮಾರಂಭವು ಡಿ.18ರಂದು ಆದಿತ್ಯವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9.30 ಗಂಟೆಗೆ ನಡೆಯಲಿದದ್ದು,ಪೊಳಲಿ ರಾಮಕೃಷ್ಣ ತಪೋವನ, ಸ್ವಾಮಿ ವಿವೇಕಾಚೈತ್ಯನ್ಯಾನಂದ ಇವರು ಧ್ವಜಾರೋಹಣ ಮಾಡಲಿದ್ದಾರೆ. ವಿಧಾನಪರಿಷತ್ ಸದಸ್ಯರು ಮಂಜುನಾಥ ಭಂಡಾರಿ,ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.


ವಾರ್ಷಿಕೋತ್ಸವದ ಸಭಾ ಸಮಾರಂಭವು ಸಂಜೆ 4 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಬಂಟ್ವಾಳ ಶಾಸಕರು ಶ್ರೀ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ವಹಿಸಲಿದ್ದಾರೆ. ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು,. ಸಂಜೆ 4ರಿಂದ ಶಾಲಾ ಮಕ್ಕಳಿಂದ ಸಾಮೂಹಿಕ ಕವಾಯತು ಪ್ರದರ್ಶನ, ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment