ಬಂಟ್ವಾಳ: ಜೀಪ್ ಹಾಗೂ ಬೈಕ್ ನಡುವೆ ಅಪಘಾತ ನಡೆದು ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನಡೆದಿದೆ.ಬೆಳ್ತಂಗಡಿ ಮೂಲದ ವಿಜಿತ್ ಮೃತಪಟ್ಟ ಯುವಕನಾಗಿದ್ದಾನೆ.
ತೆಲಂಗಾಣದ ರಿಜಿಸ್ಟರ್ ನ ಇಸ್ಸುಜು ಕಂಪೆನಿಯ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬಂಟ್ವಾಳದಲ್ಲಿ ನಡೆಯುವ ಪಾದಾಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ
ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಡಿಕ್ಕಿಯಾಗಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಯುವಕ ಮೃತಪಟ್ಟಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.















