ಬಂಟ್ವಾಳ :ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವವು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಜ. 19 ಆದಿತ್ಯವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿಕುಂದರ್ ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಕ್ರೀಡಾಕೂಟದಲ್ಲಿ ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ತಂಡಗಳು ವಿವಿಧ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಲಿದೆ. ಮಕ್ಕಳು, ಹಿರಿಯರು, ಮಹಿಳೆಯರು ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರು ಕ್ರೀಡೋತ್ಸವ ಉದ್ಘಾಟಿಸಲಿದ್ದಾರೆ.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ. ಸಂಜೀವ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ಆಕರ್ಷಕ ಪಥ ಸಂಚಲನ ನಡೆಯಲಿದ್ದು, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಿ. ಕೆ. ಹರಿಪ್ರಸಾದ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ,ಡಿ.ವೈ.ಎಸ್.ಪಿ ಎಸ್. ವಿಜಯ ಪ್ರಸಾದ್ ಧ್ವಜಾರೋಹಣ ಮಾಡಲಿದ್ದಾರೆ, ಪಡುಮಲೆ ಕೋಟಿಚೆನ್ನಯ ಜನ್ಮಸ್ಥಾನ, ಸಂಚಲನಾ ಸಮಿತಿ, ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕ್ರೀಡಾ ಜ್ಯೋತಿ ಹಸ್ತಾಂತರಿಸಲಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್. ಎಸ್. ಸಾಯಿರಾಮ್, ಕೋಶಾಧಿಕಾರಿ ಆರ್ ಪದ್ಮರಾಜ್, ಭಾರತ್ ಕೊ-ಅಪರೇಟಿವ್ ಬ್ಯಾಂಕ್ ಲಿ. ಮುಂಬೈ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ ಲೊರೆಟೊ, ಮಾಜಿ ಶಾಸಕ ರುಕ್ಕಯ ಪೂಜಾರಿ, ಕಟಪಾಡಿ ವಿಶ್ವಾನಾಥ ಕ್ಷೇತ್ರದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ನಮ್ಮ ಕುಡ್ಲ ಆಡಳಿತ ನಿರ್ದೇಶಕ ಲೀಲಾಕ್ಷ ಬಿ ಕರ್ಕೇರಾ, ಬಿಲ್ಲವ ಬ್ರಿಗೇಡ್ ಅಧ್ಯಕ್ಷ ಸದಾನಂದ ಪೂಜಾರಿ,ಉದ್ಯಮಿ ಸುನಿತ್ ಕಿಶನ್, ಇನ್ ಸ್ಪೆಕ್ಟರ್ ಆಫ್ ಪೋಲಿಸ್ ಶಾಂತಾರಾಮ್ ಕುಂದರ್, ಡೆಪ್ಯೂಟಿ ಸುಪರಿಂಟೆಂಡೆಂಟ್ ಆಫ್ ಎಕ್ಸೈಸ್ ಗಾಯತ್ರಿ ಎಂ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ
ಶ್ರೀನಿವಾಸ ಪೂಜಾರಿ ಬಹುಮಾನ ವಿತರಣೆ ಮಾಡಲಿದ್ದರೆ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕರಾದ ಬೇಬಿ ಕುಂದರ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ
ಶಾಸಕ ಉಮಾನಾಥ ಕೋಟ್ಯಾನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ದ.ಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಮುಂಬೈ ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ ಅಮೀನ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ, ಪುತ್ತೂರು ಅಕ್ಷಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಯಂತ ನಡುಬೈಲು, ತುಳುನಾಡು ಬಿರುವೆರ್ ಅಧ್ಯಕ್ಷ ಲೋಕೇಶ್ ಕೋಡಿಕೆರೆ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷೆ ಉರ್ಮೀಳಾ ರಮೇಶ್, ವೆನ್‌ಲಾಕ್ ಯುರೋಲಾಜಿ ವಿಭಾಗದ ಮುಖ್ಯಸ್ಥ ಡಾ ಸದಾನಂದ ಪೂಜಾರಿ, ಉದ್ಯಮಿ ಮನೋಜ್ ಸರಿಪಲ್ಲ, ಪ್ರಶಾಂತ್ ಸನಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕೃಷಿ,ಕ್ರೀಡಾ,ಸಾಮಾಜಿಕ ,ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮುದಾಯದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸ ನಡೆಯಲಿದೆ.
ತಾಲೂಕಿನ ಬಿಲ್ಲವ ಸಮುದಾಯದವರಿಗೆ ಕ್ರೀಡಾ ಮನೋಭಾವ ಮತ್ತು ಸ್ಪೂರ್ತಿಯನ್ನು ಪಡೆಯಲು ಮತ್ತು ಪ್ರತಿಭೆಯನ್ನು ಗುರುತಿಸುವ ಮೂಲಕ ಸಂತೋಷ ಕೂಟ ಏರ್ಪಡಿಸಲಾಗಿದೆ.ತಾಲೂಕಿನ ಗ್ರಾಮ ಸಮಿತಿಗಳ ಬೇಟಿ ಮಾಡಿ ಅವರ ಮೂಲಕ ಸಮುದಾಯದ ಪ್ರತಿ ಮನೆಗೂ ಆಮಂತ್ರಣ ಪತ್ರ ಮುಟ್ಟಿಸುವ ಕೆಲಸ ಆಗಿದೆ.ಮುಂದಿನ ದಿನಗಳಲ್ಲಿ ಪ್ರತಿವರ್ಷ ಕೋಟಿಚೆನ್ನಯ ಕ್ರೀಡಾ ಕೂಟವನ್ನು ನಡೆಸಿಕೊಂಡು ಹೋಗುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಢಿಯಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ಶ್ರೀನಿವಾಸ ಮೆಲ್ಕಾರ್, ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್ ಉಪಸ್ಥಿತರಿದ್ದರು.