ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ 133ನೇ ರಕ್ತದಾನ ಶಿಬಿರ ಜ.18ರಂದು ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ರೋಟರಿ ಜಿಲ್ಲಾ ಮಾಜಿ ಗವರ್ನರ್ ಎನ್. ಪ್ರಕಾಶ್ ಕಾರಂತ್ ಶಿಬಿರ ಉದ್ಘಾಟಿಸುವರು. ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.
ಜಯರಾಂ ತುಂಬೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











