Coastal Bulletin

ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಪ್ರಸಿದ್ಧ ಕಾವೇಶ್ವರ ದೇವಸ್ಥಾನದಲ್ಲಿ ನಾಳೆ 17 ರಂದು (ಗುರುವಾರ) ಬೆಳಿಗ್ಗೆ ಗಂಟೆ 8.45ಕ್ಕೆ ನಡ್ವಂತಾಡಿ ಉದಯ ಪಾಂಗಣ್ಣಾಯ ಇವರ ಮಾರ್ಗದರ್ಶನದಲ್ಲಿ ದೇವರ ವಿಗ್ರಹಕ್ಕೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಧಾರ್ಮಿಕ ಉಪನ್ಯಾಸ ನೀಡಲಿದ್ದು, ಅಳದಂಗಡಿ ಅರಮನೆ ತಿಮ್ಮಣ್ಣರಸ ಡಾ.ಪದ್ಮಪ್ರಸಾದ್ ಅಜಿಲ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಗಣ್ಯರು ಭಾಗವಹಿಸುವರು.

ಈಗಾಗಲೇ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ನಡೆದಿದ್ದು, ಬ್ರಹ್ಮಕಲಶೋತ್ಸವದ ಯಶಸ್ವಿಗೆ ವಿವಿಧ ಉಪ ಸಮಿತಿ

ಸದಸ್ಯರು ಶ್ರಮಿಸುತ್ತಿದ್ದಾರೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್. ಶೆಟ್ಟಿ ತಿಳಿಸಿದ್ದಾರೆ.

Leave a Comment