Coastal Bulletin

ಬಂಟ್ವಾಳ :ಫೆ.13 ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮ ಪಂಚಾಯತ್ ನ‌ ಪೆರ್ನೆ ಅಂಗನವಾಡಿಯಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೆರಾಪಣ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ತರಭೇತಿಯಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಸೇರಿ ಒಟ್ಟು 30 ಮಂದಿ ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ

ಸಂಸ್ಥೆಯ ಸಿಬ್ಬಂದಿ ವಿಲ್ಮಾ ರವರು ಮಳೆ ನೀರು ಕೊಯ್ಲು ಘಟಕ ಮತ್ತು ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕಿನ ಜಲ ಜೀವನ್ ಮಿಷನ್ ನ ಸಮುದಾಯ ಸಂಘಟಕರಾದ ವಿಲ್ಮಾ ರವರು ಕಾರ್ಯಕ್ರಮವನ್ನು ಆಯೊಜಿಸಿ. ಯಶಸ್ವಿಗೊಳಿಸಿದರು.

Leave a Comment