Coastal Bulletin

ಮಂಗಳೂರು : ಯಕ್ಷರಂಗದ ತೆಂಕುತಿಟ್ಟಿನ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ ಅವರು ಇಹಲೋಕ ತ್ಯಜಿಸಿದ್ದಾರೆ.

ಇವರಿಗೆ 84 ವರ್ಷ ವಯಸ್ಸಾಗಿತ್ತು. ಇವರ ನಿಧನಕ್ಕೆ ಗಣ್ಯರು, ಜನಪ್ರತಿನಿಧಿಗಳು  ಸೇರಿ ಸಾವಿರಾರು ಮಂದಿ ಕಲಾವಿದರು ಸಂತಾಪ ಸೂಚಿಸಿದ್ದಾರೆ.

ಇವರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಮೂಡಬಿದಿರೆಯ

ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ.  ಹಲವು ಪ್ರಸಂಗಗಳು, ಯಕ್ಷಗಾನದ ಹಾಡುಗಳ ಅನೇಕ ಕೃತಿಯನ್ನು ರಚಿಸಿದ್ದರು.

Leave a Comment