ಬಿ.ಸಿ.ರೋಡ್: ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ. ಫೆ. 16-23: ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಜಾತ್ರಾ ಮಹೋತ್ಸವ. ಫೆ. 16ರಂದು ಪೊಳಲಿ ದ್ವಾರದ ಬಳಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ.

Coastal Bulletin
ಬಿ.ಸಿ.ರೋಡ್: ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ. ಫೆ. 16-23: ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಜಾತ್ರಾ ಮಹೋತ್ಸವ. ಫೆ. 16ರಂದು ಪೊಳಲಿ ದ್ವಾರದ ಬಳಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ.

ಬಂಟ್ವಾಳ: ಬಿ.ಸಿ.ರೋಡ್ ಪೊಲೀಸ್‌ಲೇನ್ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಜಾತ್ರಾ ಮಹೋತ್ಸವವು ಫೆ. 16ರಿಂದ 23ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಹಾಗೂ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.

ಅವರು ಗುರುವಾರ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿ, ಫೆ. 16ರಂದು ಸಂಜೆ 4ಕ್ಕೆ ಬಿ.ಸಿ.ರೋಡ್‌ನ ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಹೊರೆಕಾಣಿಕೆ ಮೆರವಣಿಗೆ ಕ್ಷೇತ್ರಕ್ಕೆ ಆಗಮಿಸಲಿದೆ ಎಂದು ತಿಳಿಸಿದರು.


ಫೆ. 17ರಂದು ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ತಂತ್ರಿಗಳಾದ ಕೀಕಾಂಗೋಡು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳು, ಮಾಣಿಲ ಮೋಹನದಾಸ ಸ್ವಾಮೀಜಿ,ರಾಜ್ಯದ ಗೃಹ ಸಚಿವ ಡಾ| ಜಿ. ಪರಮೇಶ್ವರ್, ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿ ದ್ದಾರೆ. ಸಂಜೆ 7ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿವೆ ಎಂದರು.

ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಮಾತನಾಡಿ, ಫೆ. 18ರಂದು ಬೆಳಗ್ಗೆ 11ಕ್ಕೆ ಕಟೀಲು ಕ್ಷೇತ್ರ ಪ್ರಧಾನ ಅರ್ಚಕ ವೆಂಕಟರಮಣ ಆಸ್ರಣ್ಣರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಮಧ್ಯಾಹ್ನ 2ಕ್ಕೆ ಕೃತಿ ಆರ್. ಕೈಕುಂಜೆ ಅವರಿಂದ ಶಾಸ್ತ್ರೀಯ ಸಂಗೀತ, ಸಂಜೆ 4ಕ್ಕೆ ಭರತನಾಟ್ಯ, 6ಕ್ಕೆ ಯಕ್ಷಗಾನ ನಡೆಯಲಿದೆ. ಫೆ. 19ರಂದು ಬೆಳಗ್ಗೆ

10ಕ್ಕೆ ಸುಧಾಕರ ಕೋಟೆ ಕುಂಜತ್ತಾಯರು ಅವರಿಂದ ಶ್ರೀ ಸುಬ್ರಹ್ಮಣ್ಯ ಚರಿತ್ರೆ, ಸಂಜೆ 5ಕ್ಕೆ ಕನ್ಯಾಡಿ ಶ್ರೀ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ, ರಾತ್ರಿ 8ಕ್ಕೆ ನಾಟಕ ಪ್ರದರ್ಶನಗೊಳ್ಳಲಿದೆ.

ಫೆ. 20ರಂದು ಸಂಜೆ 6ಕ್ಕೆ ವಿಠಲ ನಾಯಕ್ ಬಳಗದಿಂದ ಗೀತ ಸಾಹಿತ್ಯಸಂಭ್ರಮ, ರಾತ್ರಿ 8ಕ್ಕೆ ಜಗದೀಶ್ ಆಚಾರ್ಯ ಬಳಗದಿಂದ ಸಂಗೀತ ಗಾನ ಸಂಭ್ರಮ, ಫೆ. 21ರಂದು ಸಂಜೆ 5ಕ್ಕೆ ಒಡಿಯೂರು ಶ್ರೀ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ, ಬೆಳಗ್ಗೆ 10ಕ್ಕೆ ತಾಳಮದ್ದಳೆ, ರಾತ್ರಿ 8ಕ್ಕೆ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ, ಫೆ. 22ರಂದು ಬೆಳಗ್ಗೆ 11.33ರ ವೃಷಭ ಲಗ್ನ ಶುಭಮುಹೂರ್ತದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನೆರವೇರಲಿದೆ. ಬೆಳಗ್ಗೆ 10.30ಕ್ಕೆ ವಿದುಷಿ ಡಾ| ಸುಚಿತ್ರಾ ಹೊಳ್ಳ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಫೆ. 23ರಂದು ರಾತ್ರಿ 8ಕ್ಕೆಗುಳಿಗ ದೈವದ ವರ್ಷಾವಧಿ ಕೊಲ ನಡೆಯಲಿದೆ ಎಂದು ತಿಳಿಸಿದರು.

ಸಮಿತಿ ಪ್ರಮುಖರಾದ ಜಗನ್ನಾಥ ಶೆಟ್ಟಿ, ಸದಾಶಿವ ಬಂಗೇರ, ಸತೀಶ್ ಬಿ.ಸಿ.ರೋಡ್ ಉಪಸ್ಥಿತರಿದ್ದರು

Leave a Comment