ಬಂಟ್ವಾಳ ತಾಲೂಕಿನ ಶಂಭೂರು-ಬೊಂಡಾಲ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಸುವರ್ಣ ಸಂಭ್ರಮ ಪ್ರಯುಕ್ತ ಫೆ.15ರಂದು ಗುರುವಾರ ರಾತ್ರಿ ನಡೆದ ಕಟೀಲು ಮೇಳದ ಯಕ್ಷಗಾನ ಕಾರ್ಯಕ್ರಮದಲ್ಲಿ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಇವರಿಗೆ ಬೊಂಡಾಲ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು,
ಈ ಸಂದರ್ಭದಲ್ಲಿ ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಮತ್ತು ಸಾಲಿಗ್ರಾಮ ಮೇಳದ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಾಜಿ
ಸಚಿವ ಬಿ.ರಮಾನಾಥ ರೈ , ಸಂಸದ ನಳಿನ್ ಕುಮಾರ್ ಕಟೀಲು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ಯಕ್ಷಗಾನ ವಿದ್ವಾಂಸ ಡಾ ಪ್ರಭಾಕರ ಜೋಶಿ, ಸಮಿತಿ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.









