ಪೋಕ್ಸೋ ಪ್ರಕರಣದ ಆರೋಪಿ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ

Coastal Bulletin
ಪೋಕ್ಸೋ ಪ್ರಕರಣದ ಆರೋಪಿ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ

ಮಂಗಳೂರು (ದಕ್ಷಿಣ ಕನ್ನಡ) : ಪೋಕ್ಸೋ ಪ್ರಕರಣದ ಆರೋಪಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ಮೂಡಬಿದ್ರಿಯ ಪ್ರಕಾಶ್ ಗೋಪಾಲ್ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡ ಕೈದಿ. ಮಂಗಳೂರು ಸಬ್-ಜೈಲಿನಲ್ಲಿ ಇಂದು ಬೆಳಗ್ಗೆ 04:05 ರಿಂದ ಬೆಳಗ್ಗೆ 04:55ರ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕಾಶ್ ಗೋಪಾಲ್ ಮೂಲ್ಯ ಮೂಡಬಿದ್ರಿ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 47/2025 ರ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಆತನನ್ನು ಮಾ.11 ರಂದು ಬಿಎನ್‌ಎಸ್‌ನ ಸೆಕ್ಷನ್ 65 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6ರ ಅಡಿಯಲ್ಲಿ ಬಂಧಿಸಲಾಗಿತ್ತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಜೈಲಿನ ಸೆಲ್ ಸಂಖ್ಯೆ 2 ರ ಬ್ಯಾರಕ್ 'ಬಿ' ದಲ್ಲಿ

ಕೈದಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ವೇಳೆ ಕರ್ತವ್ಯ ನಿರತ ಸಿಬ್ಬಂದಿ ತಕ್ಷಣ ಗಮನಿಸಿ, ಅವರನ್ನು ಜೈಲಿನ ಅಧಿಕೃತ ವಾಹನದಲ್ಲಿ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷೆಯ ನಂತರ ಕೈದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNSS), 2023 ರ ಸೆಕ್ಷನ್ 194(4) ರ ಅಡಿಯಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ UDR ಸಂಖ್ಯೆ 06/2025 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾರ್ಯವಿಧಾನದ ಪ್ರಕಾರ, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Leave a Comment