ರಾಯಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. 'ಸ್ವಾತಂತ್ರ್ಯ ದಿನಾಚರಣೆ, ಆಟಿಡೊಂಜಿ ದಿನ'.

Coastal Bulletin
ರಾಯಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. 'ಸ್ವಾತಂತ್ರ್ಯ ದಿನಾಚರಣೆ, ಆಟಿಡೊಂಜಿ ದಿನ'.

ಬಂಟ್ವಾಳ:ದೇಶದ ಸ್ವಾತಂತ್ರ್ಯಕ್ಕಾಗಿ ಮಡಿದ ಯೋಧರ ಸ್ಮರಣೆ ಮತ್ತು ತುಳುನಾಡಿನ ಸಂಸ್ಕೃತಿ ಅನಾವರಣಗೊಳಿಸಿ ಯುವಜನತೆಗೆ ತಿಳಿಸುವ ಮಹತ್ಕಾರ್ಯ ಶಾಲೆಯಿಂದಲೇ ಆರಂಭಗೊಳ್ಳಬೇಕು ಎಂದು ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆೆಟ್ಟಿ ಮಾವಂತೂರು ಹೇಳಿದ್ದಾರೆ.

ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ '77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಾಯಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯ್ಕ್ ರಾಯಿ ಶುಭ ಹಾರೈಸಿದರು. ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಸಂಪನ್ಮೂಲ ವ್ಯಕ್ತಿಯಾಗಿ 'ಆಟಿಡೊಂಜಿ ದಿನ' ಮಹತ್ವ ವಿವರಿಸಿದರು.

ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಉಪಾಧ್ಯಕ್ಷೆ ಗುಣವತಿ ನೀರಲ್ಕೆ, ಸದಸ್ಯೆ ಉಷಾ ಸಂತೋಷ್, ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷ ರಾಜೇಶ ಶೆಟ್ಟಿ ಸೀತಾಳ, ಅಧ್ಯಕ್ಷ ಚಂದ್ರಶೇಖರ ಗೌಡ ಕಾರಂಬಡೆ, ಸ್ಥಾಪಕಾಧ್ಯಕ್ಷ ಹರೀಶ ಆಚಾರ್ಯ ರಾಯಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ

ರಮೇಶ ಗೌಡ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಗೌಡ ಮತ್ತಾವು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ಅಧ್ಯಕ್ಷ ಕೆ.ಪರಮೇಶ್ವರ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಗೌಡ, ಭಜನಾ ಮಂಡಳಿ ಅಧ್ಯಕ್ಷ ರಾಜೇಶ ಶಿವನಗರ, ಪ್ರಮುಖರಾದ ರಾಜೇಶ ಜೈನ್ ಪಡ್ರಾಯಿ, ವಸಂತ ಗೌಡ ಮುದ್ದಾಜೆ, ಸೋಮಪ್ಪ ಮಡಿವಾಳ, ಜಯರಾಮ ಪಡ್ರೆ, ಗಾಯತ್ರಿದೇವಿ, ಪುಷ್ಪಲತಾ ಹೋರಂಗಳ ಮತ್ತಿತರರು ಇದ್ದರು.

ಇದೇ ವೇಳೆ ವರ್ಗಾವಣೆಗೊಂಡ ಶಿಕ್ಷಕರಾದ ವಸಂತ ಮತ್ತು ಶ್ರೀಪತಿ ಭಟ್ ಇವರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ಮುಖ್ಯಶಿಕ್ಷಕಿ ಜಾನೆಟ್ ಕಾನ್ಸೆಸೊ ಸ್ವಾಗತಿಸಿ, ಶಿಕ್ಷಕಿ ಸುನೀತ ವಂದಿಸಿದರು. ಶಿಕ್ಷಕಿಯರಾದ ಬೇಬಿ ಅರಳ, ತನುಜ , ಗೀತಾ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು.

Leave a Comment