ಬಂಟ್ವಾಳ: ದೀಪಿಕಾ ಪ್ರೌಢಶಾಲೆ ಮಾಡಂಕಾಪು ಇಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಸಾಧುರವರು ಧ್ವಜ ಅರಳಿಸುವಿಕೆಯೊಂದಿಗೆ ಆಚರಿಸಲಾಯಿತು.
ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರು ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿ ರಾಷ್ಟ್ರಗೀತೆಯನ್ನು ಹಾಡಲಾಯಿತು ಎಲ್ಲ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ , ಬಲಿದಾನವನ್ನು ಸ್ಮರಿಸಿ ದೇಶದ ಏಕತೆ, ಶಿಸ್ತು ಹಾಗೂ ಜವಾಬ್ದಾರಿಯುತ ನಾಗರಿಕರಾಗಲು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕರೆ
ನೀಡಿದರು .
ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು ಶಾಲಾ ಹಿರಿಯ ವಿದ್ಯಾರ್ಥಿ ಮಾಸ್ಟರ್ ಆರನ್ ಜೋಯಲ್ ಪಿಂಟೊ ಇವರು ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಇನ್ನಷ್ಟು ಶೋಭೆಯನ್ನು ತಂದುಕೊಟ್ಟರು.













