Coastal Bulletin

ಬಂಟ್ವಾಳ :ಇಲ್ಲಿನ ಪುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫರಂಗಿಪೇಟೆ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ಎಸೆದ ವ್ಯಕ್ತಿಯೊಬ್ಬರಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ರೂ 3ಸಾವಿರ ದಂಡ ವಿಧಿಸಿದ ಘಟನೆ ಗುರುವಾರ ನಡೆದಿದೆ.

ಮಾರುತಿ ಓಮ್ನಿ ಕಾರಿನಲ್ಲಿ ವ್ಯಕ್ತಿಯೊಬ್ಬರು ಈಚೆಗೆ ತ್ಯಾಜ್ಯ ತಂದು ರಸ್ತೆ ಬದಿ ಎಸೆದಿರುವುದನ್ನು ಕಂಡ ಸ್ಥಳೀಯರು ಕಾರಿನ ನಂಬರ್ ಗುರುತಿಸಿ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಈ

ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರಿಗೆ ಪಿಡಿಒ ನೀಡಿದ ದೂರಿನ ಹಿನ್ನಲೆಯಲ್ಲಿ ಪೊಲೀಸರು ಕಾರಿನ ಮಾಲೀಕರನ್ನು ಪತ್ತೆ ಹಚ್ಚಿ ಕರೆಸಿದ ಬಳಿಕ ಪಂಚಾಯಿತಿ ದಂಡ ವಿಧಿಸಿರುವುದಾಗಿ ತಿಳಿಸಿದ್ದಾರೆ

Leave a Comment